ಮೂಡುಬಿದಿರೆ: ಶ್ರೀ ರಾಮಮಂದಿರದ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಜಿ.ಎಸ್.ಬಿ. ಸಮಾಜ ಬಾಂಧವರಿಗಾಗಿ ನ.30 ಹಾಗೂ ಡಿ.1 ರಂದು ಕೆಸರಗದ್ದೆ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಆನಂದಕ್ಕಾಗಿ ಆಟೋಟ ಸ್ಪರ್ಧೆಗಳಲ್ಲಿ ಎಲ್ಲ ವಯೋಮಾನದವರು ಸಕ್ರಿಯರಾಗಿ ಭಾಗವಹಿಸಿದ್ದರು.
ಮಂದಿರದ ಅಧ್ಯಕ್ಷ ವಿಶ್ವನಾಥ ಮಾಧವ ಪ್ರಭು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಗೌರವಾಧ್ಯಕ್ಷ ನಂದಕುಮಾರ ಆರ್. ಕುಡ್ವ, ಮೂಡುಬಿದಿರೆ, ವೇದಮೂರ್ತಿ ಪದ್ಮನಾಭ ಭಟ್ , ಹರಿಪ್ರಸಾದ್ ಶರ್ಮ, ವೆಂಕಟರಮಣ,ಹನುಮಂತ ದೇವಸ್ಥಾನದ ಮೊಕ್ತೇಸರರು, ಸಾಣೂರು ನರಸಿಂಹ ಕಾಮತ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು . ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸುಧೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.
0 Comments