ಕಾಶ್ಮೀರ: ಪ್ರವಾಸಕ್ಕೆಂದು ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಉಗ್ರರು ಭೀಕರ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ದಾಳಿಯಲ್ಲಿ ಸುಮಾರು ೨೭ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿಯಿದ್ದು ಸರಿಯಾದ ಅಂಕಿ ಸಂಖ್ಯೆಗಳು ಇನ್ನೂ ಲಭ್ಯವಾಗಬೇಕಿದೆ. ಈ ಘಟನೆಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಗೃಹ ಸಚಿವ ಅಮಿತ್ ಶಾ ಸ್ಥಳಕ್ಕೆ ದೌಡಹಿಸಲಿದ್ದಾರೆ ತಿಳಿದು ಬಂದಿದೆ.
ಪುಲ್ವಾಮ ದಾಳಿಯ ಬಳಿಕ ನಡೆದ ಭೀಕರ ದಾಳಿ ಇದಾಗಿದ್ದು, ಹಿಂದೂಗಳನ್ನೇ ಟಾರ್ಗೆಟ್ ಮಾಡಿದ ಗುರಿ ಇದು ಎಂದು ದಾಳಿಯಲ್ಲಿ ಬದುಕುಳಿದವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸೇನಾ ಸಮವಸ್ತ್ರದಲ್ಲಿ ಬಂದು ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅಯಾಕಟ್ಟಿನ ಜಾಗದಲ್ಲಿ ಈ ದಾಳಿ ನಡೆದಿದ್ದು ಪ್ರವಾಸಿಗರು ತಪ್ಪಿಸಿಕೊಳ್ಳಲು ಸಾಧ್ಯವಾಗ ಪರಿಸ್ಥಿತಿಯಲ್ಲಿ ಸಿಲುಕಿ ಕೊಂಡಿದ್ದರು.
ಒರ್ವ ಕನ್ನಡಿಗನು ಮೃತ:
ಕರ್ನಾಟಕದ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವವರು ಕೂಡ ಈ ದಾಳಿಯಲ್ಲಿ ಮೃತಪಟ್ಟಿದ್ದು, ಅವರ ಪತ್ನಿ ನನ್ನನ್ನು ಕೊಲ್ಲು ಎಂದು ಹೇಳಿದಾಗ ಮೋದಿಯ ಬಳಿ ಹೇಳು ಎಂದು ಹೇಳಿ ಅವರನ್ನು ಬಿಟ್ಟು ಉಗ್ರರು ತೆರಳಿದ್ದಾರೆ ಎಂದು ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಪ್ರಾರ್ಥಮಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

0 Comments