ಕ್ರಿಕೆಟ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ.?

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಪೋಟಕ  ಬ್ಯಾಟ್ಸ್ ಮನ್ ಹಾಗೂ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ರೋಹಿತ್ ಶರ್ಮಾ ನಾನು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತಿದ್ದೇನೆ ಇನ್ನು ಮುಂದೆ ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಆಡುತ್ತೇನೆ ಎಂದು ಇನ್ಸ್ಟಾಗ್ರಾಂ ಸ್ಟ್ರೋರಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

೨೦೨೪ರ ಟಿ೨೦ ವಿಶ್ವಕಪ್ ಗೆದ್ದ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ೨೦ಗೆ ನಿವೃತ್ತಿ ಘೋಷಿಸಿದ್ದರು, ಸದ್ಯ ರೋಹಿತ್ ನ ಈ ನಿರ್ಧಾರ ಅಭಿಮಾನಿಗಳಿಗೆ ಭಾರೀ ಬೇಸರ ತಂದಿದೆ. ಅದರೆ ಏಕದಿನ ಕ್ರಿಕೆಟ್ ನಲ್ಲಿ ತನ್ನ ಛಾಪನ್ನು ಮತ್ತೇ ಮುಂದುವರಿಸಲಿದ್ದಾರೆ ಎಂಬುದು ಖುಷಿ ವಿಚಾರ.


Post a Comment

0 Comments