ದಕ್ಷಿಣ ಕನ್ನಡದಲ್ಲಿ ಭೂಮಿ ಕಂಪಿಸಿದ ಅನುಭವ, ಭಯಭೀತಗೊಂಡ ಜನ.! ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬಂಟ್ವಾಳ: ಕರಾವಳಿ ಹಾಗೂ ಮಲೆನಾಡು ಜೆಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಧಾರಕಾರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥ ಗೊಂಡಿದೆ. ಕರಾವಳಿಯಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿದ್ದು  ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡ್ಯೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂಬ ವರದಿಯಾಗಿದೆ. 

ಕನ್ಯಾನದ ಮಂಡ್ಯೂರಿನಲ್ಲಿ ಒಂದೆರಡು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವ ಆಗಿದ್ದು ಗ್ರಾಮಸ್ಥರು ಭಯಭೀತಿಗೊಂಡಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದಾರೆ. ಈ ಪರಿಸರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಈ ರೀತಿಯ ಅನುಭವಾಗಿರಬಹುದು ಎಂದು ಅಂದಾಜಿಸಲಾಗಿದೆ.


Post a Comment

0 Comments