ಧರ್ಮಸ್ಥಳದ ಗ್ರಾಮದಲ್ಲಿನ ಪ್ರಕರಣಗಳ ಬಗ್ಗೆ ಆನೇಕ ಊಹಾಪೋಹಗಳು ನಡೆಯುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ದಿನಕ್ಕೊಂದು ಸುದ್ದಿಗಳು ಪ್ರಕಟವಾಗುತ್ತಿದ್ದು ಜನಸಾಮಾನ್ಯರಿಗೆ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎಂಬುದರ ಬಗ್ಗೆ ಗೊಂದಲ ಉಂಟಾಗಿದೆ. ತಪ್ಪು ಯಾರೇ ಮಾಡಿದ್ದರು ತಪ್ಪು, ತಪ್ಪಿತಸ್ಥರಿಗೆ ಕಾನೂನಿನ ಆಡಿಯಲ್ಲಿ ಶಿಕ್ಷೆಯಾಗಬೇಕು ಎಂಬುದು ಎಲ್ಲಾರ ಪ್ರಾರ್ಥನೆ.
ಈ ಎಲ್ಲಾ ಊಹಾಪೋಹಗಳ ನಡುವೆ ಬಿಜೆಪಿಯ ಸಿ.ಟಿ ರವಿ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಧರ್ಮಸ್ಥಳ ಎಂಬ ಕ್ಷೇತ್ರದ ಹೆಸರನ್ನು ಹಾಳು ಮಾಡಲು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಜನಸಾಮಾನ್ಯರ ಉದ್ದಾರಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಮದ್ಯವರ್ಜನ ಶಿಬಿರದಂತಹ ಆನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಇದು ಸಮಾಜದ ಉದ್ದಾರಕ್ಕಾಗಿ ಮಾಡಿರುವ ಕಾರ್ಯಕ್ರಮ ಎಂದು ಹೇಳಿಕೆ ನೀಡಿದ್ದಾರೆ.
0 Comments