ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಹಾಲಿ ಉಪಮುಖ್ಯಮಂತ್ರಿ.?

ಧರ್ಮಸ್ಥಳ: ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಸದ್ಯ ಕಳೆದ ಒಂದು ತಿಂಗಳಿನಿಂದ ಭಾರೀ ಸುದ್ದಿಯಲ್ಲಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆದಿದೆ ಎನ್ನಲಾಗಿರುವ ಷಡ್ಯಂತ್ರದ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದೆ. ಈ ನಡುವೆ ಬೇರೆ ಬೇರೆ ರಾಜಕೀಯ ಪಕ್ಷದ ನಾಯಕರು ಕ್ಷೇತ್ರಕ್ಕೆ ಭೇಟಿ ಕೊಡುತ್ತಿದ್ದು ಸತ್ಯ ಅದಷ್ಟು ಬೇಗ ಹೊರಬರಲಿ ಎಂದು ಅಣ್ಣಪ್ಪ ಸ್ವಾಮಿ ಹಾಗೂ ಮಂಜುನಾಥನಲ್ಲಿ ಬೇಡಿಕೆಯನ್ನಿಡುತ್ತಿದ್ದಾರೆ. ಈ ನಡುವೆ ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಹಾಲಿ ಮುಖ್ಯಮಂತ್ರಿಯೊಬ್ಬರು ಧರ್ಮಸ್ಥಳಕ್ಕೆ ದಿನಾಂಕ ೧೧-೦೯-೨೦೨೫ರ ಗುರುವಾರ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

Dharmasthala Temple

ಅಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಸಂಸ್ಥಾಕರು ಆಗಿರುವ ನಟ ಪವನ್ ಕಲ್ಯಾಣ್ ಗುರುವಾರ ಸಂಜೆ ಐದು ಗಂಟೆಗೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಧರ್ಭದಲ್ಲಿ ಕ್ಷೇತ್ರದಲ್ಲಿ ವಿಶೇಷ ಆರತಿ ಸೇವೆಯನ್ನು ನಡೆಸಿ ದೇವರ ಕೃಪೆಗೆ ಪಾತ್ರರಾಗಲಿದ್ದಾರೆ. ಧರ್ಮಸ್ಥಳದ ವಿರುದ್ದ ಷಡ್ಯಂತ್ರ ನಡೆದಿದೆ ಎಂದು ಚರ್ಚೆಯಾಗುತ್ತಿರುವ ನಡುವೆ ಈ ಭೇಟಿ ಭಾರೀ ಕುತೂಹಲ ಕೇರಳಿಸಿದೆ. 
Pavan Kalyan

ಪವನ್ ಕಲ್ಯಾಣ್ ರ ಜನಸೇನಾ ಪಕ್ಷ ಚಂದ್ರಬಾಬು ನಾಯ್ಡು ರವರ ಟಿಡಿಪಿ ಜೊತೆಗೆ ಮೈತ್ರಿ ಸರ್ಕಾರ ನಡೆಸುತ್ತಿರುವುದಲ್ಲದೆ ಕೇಂದ್ರದೆ ಎನ್.ಡಿ.ಎಯ ಮೈತ್ರಿ ಪಕ್ಷವಾಗಿ ಕೆಲಸ ಮಾಡುತ್ತಿದೆ. ಪವನ್ ಕಲ್ಯಾಣ್ ಅವರು ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಯಾವುದಾದರೂ ಮಾತನಾಡುತ್ತರಾ.? ಎಂಬ ಬಗ್ಗೆ ಭಾರೀ ಕುತೂಹಲ ಮೂಡಿದೆ.


Post a Comment

0 Comments