ಮೂಡುಬಿದಿರೆ: ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ ೧೭೧ನೇ ಜನ್ಮ ದಿನಾಚರಣೆ ಹಾಗೂ ಮಹಾಪೂಜೆ ಕಾರ್ಯಕ್ರಮ ವಿಜೃಂಭನೆಯಿಂದ ನಡೆಯಿತು. ಕಾರ್ಕಳ ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕ ಸದಾನಂದ ಶಾಂತಿ ನೇತೃತ್ವದಲ್ಲಿೀ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬ್ರಹ್ಮಶ್ರೀ ನಾರಯಣ ಗುರುಗಳ ಜನ್ಮ ದಿನಾಚರಣೆ ಹಾಗೂ ಮಹಾಪೂಜೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮಾತ್ರವಲ್ಲದೆ ವಕೀಲೆ ಮೇಘರಾಣಿ ಹಾಗೂ ಪತ್ರಕರ್ತ ಜಗದೀಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ವಕೀಲೆ ಮೇಘರಾಣಿ ಧಾರ್ಮಿಕ ಉಪನ್ಯಾಸ ನೀಡಿ, ನಾರಾಯಣ ಗುರುಗಳ ತತ್ವಗಳನ್ನು ಅರ್ಥ ಮಾಡಿಕೊಂಡು ನಾವು ನಮ್ಮ ಸಮಾಜದ ಏಳಿಗೆ ಮಾಡಬೇಕು ಎಂದು ಕರೆಕೊಟ್ಟರು. ನಮ್ಮ ಸಮಾಜದ ವಿದ್ಯಾರ್ಥಿಗಳು ವಿದ್ಯಾವಂತಾರಾಗಿ ಬಲಿಷ್ಠಗೊಳ್ಳುವ ಮೂಲಕ ಸಮಾಜಕ್ಕೆ ಬಲ ತುಂಬಬೇಕು ಎಂದು ಯುವವಾಹಿನಿ ಮೂಡುಬಿದಿರೆ ಅಧ್ಯಕ್ಷ ಮುರಳೀಧರ ಕೋಟ್ಯಾನ್ ತಿಳಿಸಿದರು.
ಬ್ರಹ್ಮಶ್ರೀ ನಾರಯಣ ಗುರುಗಳ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಎ ಕೋಟ್ಯಾನ್ ಹಾಗೂ ಮತ್ತಿತರ ಅತಿಥಿಗಳು ಉಪಸ್ಥಿತರಿದ್ದರು.
0 Comments