ಮೂಡುಬಿದ್ರೆಯ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿಜ್ಞಾಪನ ಪತ್ರ ಬಿಡುಗಡೆ

ಮೂಡುಬಿದ್ರೆಯ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕೊಡಂಗಲ್ಲು'ನ ಬ್ರಹ್ಮಕಲಶೋತ್ಸವದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಪ್ರಾಂಗಣದಲ್ಲಿ ಬುಧವಾರ ನಡೆಯಿತು. ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮದ ಬಳಿಕ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಆಡಳಿತ ಮಂಡಳಿಯ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. 


ಬ್ರಹ್ಮಕಲಶೋತ್ಸವದ ವೈಭವದ ಕಾರ್ಯಕ್ರಮವೂ ಮಾರ್ಚ್ 6 ರಿಂದ 8ರವರೆಗೆ ನಡೆಯಲಿದೆ. ಬ್ರಹ್ಮಕಲಶೋತ್ಸವನ್ನು ಯಶಸ್ವಿಯಾಗಿ ನಡೆಸಿಕೊಡುವ ನಿಟ್ಟಿನಲ್ಲಿ ಗ್ರಾಮಸ್ಥರು ಪ್ರತಿಮನೆಯಿಂದ 2000 ರೂಪಾಯಿಗಳನ್ನು ನೀಡುವಂತೆ ಕೋರಲಾಗಿದೆ.



Post a Comment

0 Comments