ಮಹಾರಾಷ್ಟ್ರ: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಅಜಿತ್ ಪವರ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ ಅಜಿತ್ ಪವಾರ್ ಎನ್.ಸಿ.ಪಿ ಪಕ್ಷದ ಪ್ರಮುಖ ನಾಯಕರಾಗಿದ್ದರು.
ಬಾರಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಈ ದುರ್ಘಟನೆ ಸಂಭವಿಸಿದ ಎಂದು ವರದಿಯಾಗಿದೆ. ಈ ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಡಿಜಿಸಿಎ ಈ ಬಗ್ಗೆ ತನಿಖೆ ಆರಂಭಿಸಿದೆ. ಅಜಿತ್ ಪವಾರ್ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದು ಅವರು ಜನರ ನಾಯಕ ಎಂದು ಹೇಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಅಜಿತ್ ಪವಾರ್ ಪತ್ನಿ ಸುನೇತ್ರಾ ಪವರ್ ಹಾಗೂ ತಂಗಿ ಸುಪ್ರಿಯಾ ಸುಳೆ ಮತ್ತು ಇನ್ನಿತರ ಸಂಬಂಧಿಕರು ಬಾರಮತಿಗೆ ಧಾವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಅಜಿತ್ ಪವಾರ್ ಬಾರಮತಿಗೆ ಆಗಮಿಸಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.