ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನದ ಬೆಳವಣಿಗೆಯೊಂದು ನಡೆದಿದೆ. ಸಂಕ್ರಾಂತಿಯ ಬಳಿಕ ಮುಖ್ಯಮಂತ್ರಿ ಸ್ಥಾನ ಬದಲಾಗಲಿದೆ ಎಂಬ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಈ ಸಂಧರ್ಭದಲ್ಲಿ ರಾಹುಲ್ ಗಾಂಧಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. ದೆಹಲಿಯಲ್ಲಿ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ ಎಂದು ಕೆಲ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ನಡುವೆ ಡಿ.ಕೆ ಶಿವಕುಮಾರ್ ಅವರ ಆ ಒಂದು ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ.
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ:
ರಾಹುಲ್ ಗಾಂಧಿ ಭೇಟಿ ಬಳಿಕ 'ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ' ಎಂಬ ಮಾರ್ಮಿಕ ಪೋಸ್ಟ್ ಹಾಕುವ ಮೂಲಕ ದೊಡ್ಡ ಮಟ್ಟದ ಸುಳಿವು ಒಂದನ್ನು ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ನಡುವೆ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಕೂಡ ಇದೇ ರೀತಿಯ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ಯಶಸ್ಸಿನ ಮೊದಲ ಹೆಜ್ಜೆಯೇ ಪ್ರಯತ್ನ್; ಪ್ರಯತ್ನದ ಫಲವೇ ಯಶಸ್ಸು ಎಂದು ಹಂಚಿಕೊಳ್ಳುವ ಮೂಲಕ ಇನ್ನೂ ದೊಡ್ಡ ಮಟ್ಟದ ಕುತೂಹಲಕ್ಕೆ ಕಾರಣರಾಗಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.