ಪುತ್ತೂರಿನಲ್ಲಿ ರಸ್ತೆ ದುರಸ್ತಿ ಕಾರ್ಯಕ್ಕೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ


ಪುತ್ತೂರು:  ನಗರ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳಲ್ಲಿ ಹಾಳಾದ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು. ಈ ಕಾರ್ಯಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆ ಅಧ್ಯಕ್ಷೆ ಶ್ರೀಮತಿ ಸೌಮ್ಯಾ ಶೆಟ್ಟಿ, ತಹಶೀಲ್ದಾರ್ ಶ್ರೀ ಪ್ರಸಾದ್ ಶೆಟ್ಟಿ, ಹಾಗೂ ನಗರಸಭಾ ಇಂಜಿನಿಯರ್ ಶ್ರೀ ರವಿ ನಾಯಕ್ ಉಪಸ್ಥಿತರಿದ್ದರು.
ಪುತ್ತೂರು–ಸುಬ್ರಹ್ಮಣ್ಯ ಮುಖ್ಯ ರಸ್ತೆ, ಬೊಳುವಾರು, ನರಿಮೊಗರು, ಕಬಕ ಸಂಪರ್ಕ ರಸ್ತೆಗಳು ಮೊದಲ ಹಂತದಲ್ಲಿ ದುರಸ್ತಿಗೆ ಒಳಪಡಲಿವೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ ಅವರು, “ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ರಸ್ತೆ ಕಾಮಗಾರಿಗಳನ್ನು ವೇಗವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸುವುದು ನಮ್ಮ ಆದ್ಯತೆ” ಎಂದು ಹೇಳಿದರು

ನಗರಸಭೆ ಅಧ್ಯಕ್ಷೆ ಸೌಮ್ಯಾ ಶೆಟ್ಟಿ ಮಾತನಾಡಿ, “ನಗರದ ಒಳ ರಸ್ತೆಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತದೆ” ಎಂದು ತಿಳಿಸಿದರು. ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಈ ಕಾರ್ಯದಿಂದ ಸಂಚಾರ ಸಮಸ್ಯೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.