ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಲಾಡಿ ನಿವಾಸಿ ಉದ್ಯಮಿ ಗೋಪಾಲ ಶೆಟ್ಟಿಯವರ ಪತ್ನಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ವಿಲಾಸಿನಿ(೮೦) ನಿಧನರಾದರು. ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ೩೫ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ವಿಲಾಸಿನಿಯವರು ಪ್ರಾರ್ಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಆ ಬಳಿಕ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ
ಜೀವನದಲ್ಲಿ ಧಾರ್ಮಿಕತೆ, ಶಿಸ್ತು ಹಾಗೂ ಸರಳ ಜೀವನಕ್ಕೆ ಹೆಸರಾದವರು. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ವಿದ್ಯಾರ್ಥಿಗಳು ಹಾಗೂ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ.