ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇತ್ತೀಚೆಗೆ (ಡಿಸೆಂಬರ್ 2025) ನಡೆಸಿದ ನರ್ಸಿಂಗ್ ಪರೀಕ್ಷೆಯಲ್ಲಿ ಇಲ್ಲಿನ ಆಳ್ವಾಸ್ ನರ್ಸಿಂಗ್ ಮಹಾವಿದ್ಯಾಲಯವು ಅತ್ಯುತ್ತಮ ಸಾಧನೆ ಮಾಡಿದೆ. ಅಂತಿಮ ವರ್ಷದ ನರ್ಸಿಂಗ್ ಪರೀಕ್ಷೆಗೆ ಹಾಜರಾಗಿದ್ದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ನೂರಕ್ಕೆ ನೂರು ಫಲಿತಾಂಶ ತಂದುಕೊಟ್ಟಿದ್ದಾರೆ.
ಒಟ್ಟು ವಿದ್ಯಾರ್ಥಿಗಳ ಪೈಕಿ 20 ಅಭ್ಯರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ (Distinction) ಹಾಗೂ ಇಬ್ಬರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಎತ್ತಿ ಹಿಡಿದಿದ್ದಾರೆ. ಈ ಅಮೋಘ ಸಾಧನೆಗಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ಡಾ. ವಿನಯ್ ಆಳ್ವ, ಪ್ರಾಂಶುಪಾಲರಾದ ಡಾ. ಬಿ.ಎ. ಯತಿಕುಮಾರ ಸ್ವಾಮಿ ಗೌಡ ಮತ್ತು ಬೋಧಕ ವರ್ಗದವರು ವಿದ್ಯಾರ್ಥಿಗಳನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.