ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಎಂಬಲ್ಲಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತವು ದಾರುಣ ಅಂತ್ಯ ಕಂಡಿದೆ. ಚಿಕಿತ್ಸೆ ಫಲಕಾರಿಯಾಗದೆ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಸಾಂಧರ್ಭಿಕ ಚಿತ್ರ
ಘಟನೆಯ ವಿವರ:
ಬನ್ನಡ್ಕ ದೇವಸ್ಥಾನದ ಸಮೀಪ ಸೂರಜ್ ಅಂಚನ್ ಮತ್ತು ಶ್ರವಣ್ ಅವರು ಬೈಕ್‌ನಲ್ಲಿ ರಸ್ತೆ ದಾಟುತ್ತಿದ್ದಾಗ, ಕಾರ್ಕಳದ ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಇವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳು: ಮೂಡುಬಿದಿರೆಯ ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್. ಅಪಘಾತದ ವೇಳೆ ಇವರು ಬೈಕ್ ಚಲಾಯಿಸುತ್ತಿದ್ದರು.
ಅಪಘಾತ ಸಂಭವಿಸಿದ ತಕ್ಷಣ ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ದುರದೃಷ್ಟವಶಾತ್, ವಿದ್ಯಾರ್ಥಿ ಶ್ರವಣ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

