ಬಂಟ್ವಾಳ : ವಾಸ್ತಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಬಂಟ್ವಾಳ ತಾಲೂಕು ವತಿಯಿಂದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದರೆ.
ಸಂಗೀತ ಶರ್ಮ ಪಿ ಜಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ ಸಾಧನೆಯನ್ನು ಗುರುತಿಸಿ ಈಗಾಗಲೇ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ” ಪ್ರಶಸ್ತಿ, ರಾಜ್ಯಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿ, ಹಾಗೂ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆ ಸಿ ಐ ಮುಂತಾದ ಅನೇಕ ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದ್ದು , ಅವರ ವಿಶೇಷ ಸೇವೆಯನ್ನು ಗುರುತಿಸಿ ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಈ ವರ್ಷದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ ರಾಜ್ಯ ಪ್ರಶಸ್ತಿಗೆ” ಆಯ್ಕೆಯಾಗಿರುತ್ತಾರೆ.