ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಅಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಬಿ ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸ್ನೇಹ ಪರಪ್ಪ ಸಮಾಯಿ ಕನ್ನಡ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಪ್ರಶಸ್ತಿಯ ಪಡೆದುಕೊಂಡರು.
ತನ್ನ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.