ಮೂಡುಬಿದಿರೆ ಮೂಲದ ಬಾಲಚಂದ್ರ ಮಂಜನಬೈಲು ನಿಧನ: ಬೆಳ್ಳಟ್ಟಿಯಲ್ಲಿ ಅಂತ್ಯಕ್ರಿಯೆ


ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಮಂಜನಬೈಲು ಮೂಲದವರಾದ, ಪ್ರಸ್ತುತ ಗದಗ ಜಿಲ್ಲೆಯ ಬೆಳ್ಳಟ್ಟಿ ನಿವಾಸಿ ಬಾಲಚಂದ್ರ ಮಂಜನಬೈಲು (65) ಅವರು ಫೆಬ್ರವರಿ 2ರ ಸೋಮವಾರ ಹೃದಯಾಘಾತದಿಂದ ನಿಧನರಾದರು.

ಅನಾರೋಗ್ಯ ಕಾಣಿಸಿಕೊಂಡ ತಕ್ಷಣ ಅವರನ್ನು ಶಿರಹಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಹಲವು ವರ್ಷಗಳಿಂದ ಬೆಳ್ಳಟ್ಟಿಯಲ್ಲಿ ನೆಲೆಸಿದ್ದ ಬಾಲಚಂದ್ರ ಅವರು ಅಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು ಹಾಗೂ ಪತ್ರಿಕಾ ವಿತರಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಇವರು, ಸ್ಥಳೀಯವಾಗಿ ಎಲ್ಲರೊಂದಿಗೆ ಸುಂದರ ಬಾಂಧವ್ಯ ಹೊಂದಿದ್ದರು. ಊರಿನ ಹಾಗೂ ಕುಟುಂಬದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಸಹೋದರರು, ಮೂವರು ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.