ಮೂಡುಬಿದಿರೆ: ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಡುಬಿದಿರೆಯ ಜನಪ್ರಿಯ ವಿಡಿಯೋ ಕಂಟೆಂಟ್ ಕ್ರಿಯೇಟರ್ ಆಗಿದ್ದಾ ಸೂರಜ್ ಅಂಚನ್ ಹಾಗೂ ಅವರ ಸಂಬಂಧಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂಧರ್ಭದಲ್ಲಿ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಪ್ರಸ್ತುತ ಗಾಯಳುಗಳನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.