ಮೂಡುಬಿದಿರೆ: ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಂಧರ್ಭಿಕ ಚಿತ್ರ
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳ ಕೊರತೆ ಮತ್ತು ಅತಿವೇಗದ ಚಾಲನೆ ಇಂತಹ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
