ಬೈಂದೂರು: ಜನತಾ ಪಾರ್ಟಿಯ ಮಾಜಿ ಶಾಸಕ ಬಿ.ಆಪ್ಪಣ್ಣ ಹೆಗ್ಡೆ ನಿಧನ


ಉಡುಪಿ: ಕೊಲ್ಲೂರು ಮೂಕಂಬಿಕಾ ದೇವಸ್ಥಾನ ಹಾಗೂ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ಬಿ. ಅಪ್ಪಣ್ಣ ಹೆಗ್ಡೆ ಅಸ್ಪತ್ರೆಯಲ್ಲಿ ಫೆಬ್ರವರಿ ೭ ರಂದು ವಯೋಸಹಜ ಖಾಯಿಲೆಯಿಂದ ನಿಧನರಾದರು. 
ಬಿ. ಅಪ್ಪಣ್ಣ ಹೆಗ್ಡೆ ಅವರಿಗೆ ಸುಮಾರು 90 ವರ್ಷ ವಯಸ್ಸಾಗಿತ್ತು. ರಾಜಕೀಯದಲ್ಲಿ ಸಕ್ರೀಯರಾಗಿದ್ದ ಇವರು 1983 ರಿಂದ 1985ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಜನತಾ ಪಾರ್ಟಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಆಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.