ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ‌ ವಿರುದ್ದ ಕಿರುಕುಳದ ಆರೋಪದಡಿ ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು.?


ಮೂಡುಬಿದಿರೆ: ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದ ಆಡಿಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ‌ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಖಾಸಗೀ ವಾಹಿನಿಯೊಂದು ವರದಿ ಮಾಡಿದೆ. ಬೆಳ್ತಂಗಡಿಯಲ್ಲಿ ಪೋಲಿಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ಕಿರುಕುಳ ನೀಡಿದ್ದು ಎನ್ನಲಾಗಿದ್ದು, ಈಗ ಮಹಿಳೆಯೊಬ್ಬರು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಸಾಮಾಜೀಕ ಜಾಲತಾಣದಲ್ಲಿ ಹಲವಾರು ವಿಡಿಯೋಗಳು ಹರಿದಾಡಿದ್ದು, ಈ ಬಗ್ಗೆ ಸತ್ಯಾಸತ್ಯಯನ್ನು ತಿಳಿಯಲು ದಕ್ಷಿಣ ಕನ್ನಡ ಜಿಲ್ಲಾ ಕಮಿಷನರ್ ಸಮಗ್ರ ತನಿಖೆಗೆ ಆದೇಶ ನೀಡಿದ್ದು, ಕೂಡಲೇ ಜಾರಿಗೆ ಬರುವಂತೆ ಸಸ್ಪೆಂಡ್ ಮಾಡಲು ಸೂಚಿಸಿದ್ದರು. ಈಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣಕ್ಕೆ ಮತ್ತೊಂದು ಟ್ವೀಸ್ಟ್ ಸಿಕ್ಕಿದೆ ಎನ್ನಲಾಗಿದೆ.