ಮೂಡುಬಿದಿರೆ: ಪಟ್ಟಣದ ಪುರಸಭೆ ವ್ಯಾಪ್ತಿಯ ಮಹಾವೀರ ರಸ್ತೆಯಲ್ಲಿ, ಮೆಸ್ಕಾಂ ಕಚೇರಿ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.
ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ (68) ಮತ್ತು ಅವರ ಮಗ ಶ್ರೀನಿವಾಸ ಶೆಟ್ಟಿ (ಸೀನ) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ಇವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಶೆಟ್ಟಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿಸಿದೆ.