ಮೂಡುಬಿದಿರೆ: ಇಲ್ಲಿನ ಪಾಲಡ್ಕದ ಸಂತ ಇಗ್ನೇಶಿಯಸ್ ಆಂಗ್ಲ ಮಾಧ್ಯಮ ಶಾಲೆಯು ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಸತತ ಎಂಟನೇ ವರ್ಷವೂ ತನ್ನ ಸಾಧನೆಯನ್ನು ಮುಂದುವರಿಸಿದೆ.
ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 41 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (Distinction) ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ಈ ಅಮೋಘ ಸಾಧನೆಗೆ ಶ್ರಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸುವುದರ ಜೊತೆಗೆ, ಯಶಸ್ಸಿನ ಹಿಂದೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದೆ.