ಮೂಡುಬಿದಿರೆ: ಬಸದಿಗಳ ಮೊಕ್ತೇಸರ, ಜೈನ್ ಮಿಲನ್ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ನಿಧನ


ಮೂಡುಬಿದಿರೆ: ಪುತ್ತಿಗೆ ಗ್ರಾಮದ ಆನಡ್ಕ ನಿವಾಸಿ, ಬಸದಿಗಳ ಮೊಕ್ತೇಸರ ಹಾಗೂ ಜೈನ್ ಮಿಲನ್‌ನ ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಕುಮಾರ್ (59) ಅವರು ಅನಾರೋಗ್ಯದ ಕಾರಣ ಸೋಮವಾರ ಬೆಳಿಗ್ಗೆ ನಿಧನರಾದರು.

ದಿ. ಜೀವಂಧರ್ ಕುಮಾರ್ ಅವರ ಪುತ್ರರಾದ ಇವರು, ಕೃಷಿಕರಾಗಿದ್ದರಲ್ಲದೆ ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ದಿನೇಶ್ ಕುಮಾರ್ ಅವರು ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸ್ಥಳೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.