ಮೂಡುಬಿದಿರೆ: ಇತ್ತೀಚೆಗೆ ಬೆಳಕಿಗೆ ಬಂದ ಪ್ರಕರಣವೊಂದರಲ್ಲಿ ಅಮಾನತುಗೊಂಡಿರುವ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್'ಗೆ ಮತ್ತೊಂದು ಶಾಕ್ ಎದುರಾಗಿದೆ. ತನ್ನ ವಿರುದ್ದ ದಾಖಲಾದ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಆರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನರಿದ್ದ ಪೀಥ ವಜಾಗೊಳಿಸಿದೆ ಎಂದು ವರದಿಯಾಗಿದೆ.
ಈ ಪ್ರಕರಣದಲ್ಲಿ ಯಾವುದೇ ಹಣದ ವ್ಯವಹಾರವಾದ್ದರೆ ಅಂತವರ ಮೇಲೆ ತನಿಖೆ ನಡೆಯಲಿ ಎಂದು ಹೇಳಿದೆ. ಮಾತ್ರವಲ್ಲದೆ ತನಿಖೆಯನ್ನು ಮುಂದುವರಿಸಬಹುದು ಎಂದು ಸೂಚಿಸಿದೆ.
