ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬAಧಿತ ತೊಂದರೆಗಳಿAದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಮುಂತಾದ ಲಕ್ಷಣಗಳನ್ನು ಹೊಂದಿರುವವರು ತಕ್ಷಣ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ತಜ್ಞ ವೈದ್ಯರ ಸಲಹೆಯ ಮೇರೆಗೆ ಅಗತ್ಯವಿರುವ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ.
ಆಧುನಿಕ ಕ್ಯಾಥ್ ಲ್ಯಾಬ್ ಸೌಲಭ್ಯ, ಅನುಭವಸಂಪನ್ನ ಹೃದಯ ತಜ್ಞರು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದು.
ಯೋಜನೆಯಡಿ ಹೃದಯದ ರಕ್ತನಾಳಗಳಲ್ಲಿನ ಅಡಚಣೆಯನ್ನು ನಿವಾರಿಸುವ ಆಂಜಿಯೋಪ್ಲಾಸ್ಟಿ, ಪೇಸ್‌ಮೇಕರ್ ಅಳವಡಿಕೆ, ಹೃದಯ ರಂಧ್ರ ಚಿಕಿತ್ಸೆ ಹಾಗೂ ಇತರ ಹೃದಯ ಚಿಕಿತ್ಸೆಗಳು ಒಳಗೊಂಡಿವೆ. ಆಳ್ವಾಸ್ ಹೆಲ್ತ್ ಸೆಂಟರ್‌ನ ಸುತ್ತ ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿರುವ ಮೂಲ್ಕಿ, ನಾರಾವಿ, ಕಾರ್ಕಳ ಹಾಗೂ ಕಿನ್ನಿಗೋಳಿ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಅರ್ಹ ಫಲಾನುಭವಿಗಳು ಉಚಿತ ಹೃದಯ ಚಿಕಿತ್ಸಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.
ಆಯುಷ್ಮಾನ್ ಕಾರ್ಡ್ ಹೊಂದಿರುವ ಅರ್ಹ ರೋಗಿಗಳು ಅಗತ್ಯ ದಾಖಲೆಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಅಂಜಿಯೋಪ್ಲಾಸ್ಟಿ ಚಿಕಿತ್ಸ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880807509 ಯನ್ನು ಸಂಪರ್ಕಿಸಲು ಕೋರಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್‌ನ ಹೃದ್ರೋಗ ಚಿಕಿತ್ಸಾ ತಜ್ಞ ಡಾ ದಿತೇಶ್ ಎಂ, ಆಳ್ವಾಸ್ ಹೆಲ್ತ್ ಸೆಂಟರ್‌ನ ವೈದ್ಯಕೀಯ ಅಧೀಕ್ಷಕ ಡಾ ಹರೀಶ್ ನಾಯಕ್, ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ ಶಮಂತ್ ಶೆಟ್ಟಿ, ಆಳ್ವಾಸ್ ವೈದ್ಯಕೀಯ ಕಾಲೇಜಿನ ಕರ‍್ಯನಿರ್ವಾಹಕ ನಿರ್ದೇಶಕ ಡಾ ವಿನಯಚಂದ್ರ ಶೆಟ್ಟಿ ಉಪಸ್ಥಿತರಿದ್ದರು.