ಅಡ್ಡಮತದಾನ ಮಾಡಿದವರಿಗೆ ಬಿಗ್ ಶಾಕ್ ನೀಡಿದ ಬಿಜೆಪಿ ಹೈಕಮಾಂಡ್.? ಬದಲಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ.?


ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕರಿಗೆ ಎದೆ ಢವ ಢವ ಎನ್ನಲು ಶುರುವಾಗಿದ್ದು ಶೀಘ್ರದಲ್ಲಿಯೇ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಅಡ್ಡಮತದಾನ ಮಾಡಿದ ನಾಯಕರ ಪಟ್ಟಿ ಬಿಜೆಪಿ ಹೈಕಮಾಂಡ್ ನಾಯಕರ ಬಳಿ ಸೇರಿದ್ದು   ಯಾವುದೇ ಕ್ಷಣದಲ್ಲಾದರೂ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ ರಾಜ್ಯ ಬಿಜೆಪಿ ನಾಯಕರು ವಿಧಾನಪರಿಷತ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದೇ ಇದಕ್ಕೆ ಕಾರಣ ಎಂಬ ಚರ್ಚೆಗಳು ಜೋರಾಗಿ ಕೇಳಿಬರುತ್ತಿದ್ದು, ಈ ಕಾರಣದಿಂದಾಗಿ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಬಹುದು ಎಂಬುದರ ಬಗೆಗೆಗೂ ಚರ್ಚೆಗಳು ಜೋರಾಗಿದೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪರಿಷತ್ ಚುನಾವಣೆಗೂ ಮುನ್ನ ಬಿಜೆಪಿಯ ಸುಮಾರು ೧೬ ಶಾಸಕರನ್ನು ಭೇಟಿಯಾಗಿದ್ದರು ಎಂಬ ಮಾಹಿತಿಯೊಂದ ಕೇಳಿ ಬರುತ್ತಿದ್ದು ಇದರ ಪರಿಣಾಮವಾಗಿಯೆ ಆಡ್ಡ ಮತದಾನವಾಗಿರುವ ಸಾಧ್ಯತೆ ಹೆಚ್ಚು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ