ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವ ನೂತನ ಸರ್ಕಾರಕ್ಕೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಪ್ರಮಾಣವಚನ ಸ್ವೀಕರಿಸಿದ ಎರಡನೇ ದಿನಕ್ಕೆ ನೂತನ ಸಚಿವ ರಾಮಲಿಂಗ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿದ್ದಾರೆ.
ಬೆಂಗಳೂರು ಆಭಿವೃದ್ದಿ ಇಲಾಖೆಯ ಖಾತೆಗೆ ಬೇಡಿಕೆ ಇಟ್ಟಿದ್ದ ಸಚಿವರಿಗೆ ಆ ಖಾತೆಯ ಬದಲಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಖಾತೆಯನ್ನು ನೀಡಲಾಗಿತ್ತು. ಈ ಬಗ್ಗೆ ನಿನ್ನೇ ಅಸಮಾಧಾನ ಹೊರ ಹಾಕಿದ್ದ ಸಚಿವರು ಇಂದು ತಾವು ರಾಜೀನಾಮೆ ನೀಡುವುದಾಗಿ ಸಚಿವರು ಮಾಧ್ಯಮಗಳಿಗೆ ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.
