ಮೂಡುಬಿದಿರೆ: ಶ್ರೀ ಗಣೇಶೋತ್ಸವ ಸಮಿತಿ ಕಲ್ಲಬೆಟ್ಟು ಇದರ ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಉದ್ಯಮಿ  ರಾಜೇಶ್ ಬೈಲೂರು ಆಯ್ಕೆಯಾಗಿದ್ದಾರೆ. ಸಮಿತಿಯ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಅಧ್ಯಕ್ಷರಿಗೆ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜೇಶ್ ಬೈಲೂರು ಅವರು ಸಮಿತಿಯ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ, ಯುವಜನರನ್ನು ಸಂಘಟಿಸುವ ಮೂಲಕ ಗಣೇಶೋತ್ಸವವನ್ನು ಇನ್ನಷ್ಟು ಯಶಸ್ವಿಯಾಗಿ ನಡೆಸುವ ವಿಶ್ವಾಸವನ್ನು ಪ್ರಮುಖರು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.