ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಶಾಲಾ-ಕಾಲೇಜುಗಳಿಗೆ ಆಗಸ್ಟ್ 1ರ ಶನಿವಾರ ರಜೆ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಭಾರೀ ಮಳೆಯ ಪರಿಣಾಮದಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲಾಧಿಕಾರಿಯವರ ಆದೇಶದ ಪ್ರಕಾರ ಜಿಲ್ಲೆಯ ಎಲ್ಲಾ ಖಾಸಗೀ ಹಾಗೂ ಸರ್ಕಾರಿ - ಅಂಗನವಾಡಿ, ಪ್ರಾರ್ಥಮಿಕ ಹಗೂ ಪ್ರೌಢ ಶಾಲೆ, ಪದವಿಪೂರ್ವ, ಡಿಪ್ಲೋಮಾ ಹಾಗೂ ಐಟಿಐ ಕಾಲೇಜುಗಳಿಗೆ ಹಾಗೂ ವಸತಿ ಶಾಲೆಗಳಿಗೂ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ನದಿ ಹಾಗೂ ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಾಗೆ ಸೂಚಿಸಿದ್ದಾರೆ.