ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಜುಲೈ 25ರ ಶನಿವಾರದಂದು ಶಾಲಾ-ಕಾಲೇಜು ರಜೆ


ಮಂಗಳೂರು: ದಕ್ಷಿಣ ಕನ್ನಡದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಯೆಲ್ಲೋ ಆಲರ್ಟ್ ಘೋಷಣೆಯಾಗಿರುವ ಕಾರಣ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗೀ  ಅಂಗನವಾಡಿ, ಪ್ರಾರ್ಥಮಿಕ, ಫ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಈ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಸಂದೇಶ ರವಾನಿಸಲಾಗಿದ್ದು, ನದಿ ಹಾಗೂ ಸಮುದ್ರ ತೀರ ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದ್ದು, ತುರ್ತು ಸಂಧರ್ಭದಲ್ಲಿ ಜಿಲ್ಲಾ ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಲಾಗಿದೆ.