ಮಂಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದ್ದು ನಾಳೆ ಜಿಲ್ಲೆಯಾದ್ಯಂತ ರೆಡ್ ಆಲರ್ಟ್ ಘೋಷಣೆಯಾಗಿದ್ದು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ದ್ವಿತೀಯ ಪಿಯುಸಿ ವರೆಗಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಿಸಿದೆ.
