ಬೆದ್ರದ ಸರ್ಕಾರಿ ಆಸ್ಪತ್ರೆ ಬಳಿಯ ಬಸ್ ತಂಗುದಾಣದಲ್ಲಿ ಅಪರಿಚಿತ ಶವ ಪತ್ತೆ


ಮೂಡುಬಿದಿರೆ: ಪಟ್ಟಣದ ಸರ್ಕಾರಿ ಆಸ್ಪತ್ರೆ ಬಸ್ ತಂಗುದಾಣದಲ್ಲಿ ಗುರುವಾರ ವೃದ್ಧನೊಬ್ಬರ ಶವ ಪತ್ತೆಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತು.

ಸ್ಥಳೀಯರು ಬಸ್ ತಂಗುದಾಣದಲ್ಲಿ ವೃದ್ಧರು ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ತಕ್ಷಣ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಮೃತರ ಗುರುತು ಹಾಗೂ ಸಾವಿನ ಕಾರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ತಿಳಿದುಬರಬೇಕಿದೆ.