ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದ್ದು ನಾಳೆ ಶಾಲೆ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾರ್ಥಮಿಕ, ಫೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜ್ ಗಳಿಗೆ ದಿನಾಂಕ ೦೮-೦೭-೨೦೨೬ರ ಬುಧವಾರ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ತಗ್ಗು ಪ್ರದೇಶ, ಹೆಚ್ಚು ನೀರು ಇರುವ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯ ಬಾರದು ಎಂದು ಆದೇಶ ಹೊರಡಿಸಿದ್ದು, ಜಿಲ್ಲಾಡಳತ ಯಾವುದೇ ರೀತಿಯ ತುರ್ತು ಪರಿಸ್ಥಿತಿಗೆ ಸಿದ್ದರಿರುವಂತೆ ಸೂಚಿಸಲಾಗಿದೆ.