ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ


ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಹಿನ್ನಲೆ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ನಾಳೆಯೂ ಇದೇ ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿಲಾಗಿದೆ.