ಧರ್ಮೇಂದ್ರ ಪ್ರಧಾನ್; ಕರ್ನಾಟಕದ ವ್ಯಕ್ತಿಗೆ ಮತ್ತೊಂದು ಹೊಸ ಜವಾಬ್ದಾರಿ.?


ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಆಂಗೀಕರಿಸಿದರು. ಶಿಕ್ಷಣ ಸಚಿವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಹೊಸ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಆಂದಾಜಿಸಲಾಗಿತ್ತು, ಅದರೆ ಈ ಸ್ಥಾನಕ್ಕೆ ಕರ್ನಾಟಕದ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು,  ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರು, ಹಾಗೂ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಪ್ರಹ್ಲಾದ್ ಜೋಶಿ ಅವರು ಇದೀಗ ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿಯಾಗಿ ಜವಾಬ್ದಾರಿಯನ್ನು ವಹಿಸುವ ಮೂಲಕ ನೇಮಕ ಮಾಡಲಾಗಿದೆ. ಈ ಮೂಲಕ ಪ್ರಹ್ಲಾದ್ ಜೋಶಿಯವರು ಮತ್ತೊಂದು ಹೊಸ ಚಾಲೆಂಜ್ ಸ್ವೀಕರಿಸಲು ಸಿದ್ದರಾಗಿದ್ದಾರೆ.