ಕಾಸರಗೋಡು: ಕೇರಳ ರಾಜ್ಯ-ಕರ್ನಾಟಕ ಗಡಿಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶಿಷ್ಟ ಸೇವೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ, ಕಾಸರಗೋಡಿನ ಪ್ರಸಿದ್ಧ ಶಿಕ್ಷಣ ತಜ್ಞೆ ನಯನ ಕೊಡಿಯಾಲ್ ಬೈಲ್ ಅವರಿಗೆ ಪ್ರತಿಷ್ಠಿತ "ಶಿಕ್ಷಕರ ರತ್ನ – Light of Hopes (Teachers Achievement Award 2026)" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಪ್ರಶಸ್ತಿಯನ್ನು ಜುಲೈ 26, 2026ರಂದು ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ನಯನ ಕೊಡಿಯಾಲ್ ಬೈಲ್ ಶಿಕ್ಷಣ ಕ್ಷೇತ್ರದಲ್ಲಿ ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಅವರ ಈ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜದ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಇನ್ನಷ್ಟು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.